ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಪೌಜಿಯಾ ತರುನ್ನುಮ್ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.
ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ಜಿಪಂ ಸಿಇಒ ದಿಢೀರ್ ಭೇಟಿ, ಪರಿಶೀಲನೆ - Gudibande Government Hospital problems
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಪೌಜಿಯಾ ತರುನ್ನುಮ್ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಿಇಒ ಭೇಟಿ
ಆಸ್ಪತ್ರೆಯ ಒಳರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಸಿಇಒ ಮಾಹಿತಿ ಪಡೆದರು. ಪ್ರತಿನಿತ್ಯ ಬೆಡ್ ಬದಲಾವಣೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ವಚ್ಛತೆ ಕಾಪಾಡಬೇಕು ಮತ್ತು ಸೂಕ್ತ ಚಿಕಿತ್ಸೆ ನೀಡಲು ಆಸ್ಪತ್ರೆಯ ಆಡಳಿತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನಂತರ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಸಣ್ಣಪುಟ್ಟ ಸಮಸ್ಯೆಗಳಿವೆ. ಈ ಬಗ್ಗೆ ಮಾಹಿತಿ ಸ್ವೀಕರಿಸಿ, ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು. ರೋಗಿಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗುವುದು ಎಂದರು.