ಕರ್ನಾಟಕ

karnataka

ETV Bharat / state

ರಜಾ ಮಜಾ ಇಲ್ವೇ ಇಲ್ಲ,, ಸಂಡೇ ಆದರೂ ಕೆಲಸ ಮಾಡಿದ ಸರ್ಕಾರಿ ಅಧಿಕಾರಿಗಳು.. - ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಎಸ್ ಎಲ್ ವಿಶ್ವನಾಥ್ ಹಾಗೂ ಕಂದಾಯ ಅಧಿಕಾರಿಗಳು ಸೇರಿ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಿ ರಜಾ ದಿನವಾದ ಭಾನುವಾರವೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರಜಾ ದಿನವೂ ಸರ್ಕಾರಿ ಕೆಲಸ ಮಾಡಿ ಮೆಚ್ಚುಗೆ ಗಳಿಸಿದ ಅಧಿಕಾರಿಗಳು

By

Published : Oct 6, 2019, 8:08 PM IST

ಚಿಕ್ಕಬಳ್ಳಾಪುರ:ಚಿಂತಾಮಣಿ ತಾಲೂಕು ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಎಸ್‌ ಎಲ್‌ ವಿಶ್ವನಾಥ್ ಹಾಗೂ ಕಂದಾಯ ಅಧಿಕಾರಿಗಳು ಸೇರಿ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಿ ರಜಾ ದಿನವಾದ ಭಾನುವಾರದಂದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರಜಾ ದಿನವೂ ಸರ್ಕಾರಿ ಕೆಲಸ ಮಾಡಿ ಮೆಚ್ಚುಗೆ ಗಳಿಸಿದ ಅಧಿಕಾರಿಗಳು..

ತಾಲೂಕಿನ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ತಮ್ಮ ಕುಟುಂಬ ಸದಸ್ಯರ ವಿವರಗಳನ್ನು ತಾವೇ ಪರಿಶೀಲಿಸಿ ಸರಿಪಡಿಸುವ ಅವಕಾಶವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಸಾರ್ವಜನಿಕರಿಗೆ ತಿಳಿಸಿದರು.

ಚುನಾವಣಾ ಆಯೋಗ ಇವಿಪಿ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶ ಬಳಸಿಕೊಂಡು ಯಾವುದೇ ವ್ಯಕ್ತಿ ತನ್ನ ಮೊಬೈಲ್ ಮೂಲಕ ತನ್ನ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ವಿವರಗಳ ನ್ಯೂನತೆಗಳನ್ನು ಗುರುತಿಸಿ, ಸೂಕ್ತ ದಾಖಲೆಗಳನ್ನು ಸಲ್ಲಿಸುವ ಮೂಲಕ ಸ್ಥಳದಲ್ಲಿಯೇ ಸರಿಪಡಿಸಬಹುದು. ಭಾವಚಿತ್ರ, ಹೆಸರು, ವಿಳಾಸ ಹೀಗೆ ಇನ್ನುಳಿದ ಅಗತ್ಯ ಅಂಶಗಳ ನೂತನ ಸೇರ್ಪಡೆಯನ್ನೂ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಮೋಹನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಚಂದ್ರಶೇಖರ್​, ನೀಲಮ್ಮ, ಶಶಿಕಲಾ ಸೇರಿ ಇನ್ನಿತರೆ ಅಧಿಕಾರಿಗಳು ಇವತ್ತು ಕೆಲಸ ಮಾಡಿದರು.

ABOUT THE AUTHOR

...view details