ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 46 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 35 ಜನ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 24, ಚಿಂತಾಮಣಿ 4, ಗೌರಿಬಿದನೂರು 4, ಬಾಗೇಪಲ್ಲಿ 8, ಶಿಡ್ಲಘಟ್ಟದಲ್ಲಿ 6 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಬ್ಬರಿಗೆ ಟ್ರಾವೆಲ್ ಮಾಡಿದ್ದರಿಂದ ಹಾಗೂ ಉಳಿದ 45 ಜನರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ.
ಚಿಂತಾಮಣಿ 10, ಚಿಕ್ಕಬಳ್ಳಾಪುರ 3, ಗೌರಿಬಿದನೂರು 10, ಶಿಡ್ಲಘಟ್ಟ 5, ಬಾಗೇಪಲ್ಲಿ 1 ಹಾಗೂ ಗುಡಿಬಂಡೆ ವ್ಯಾಪ್ತಿಯಲ್ಲಿ 6 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 968 ಸಕ್ರಿಯ ಸೋಂಕಿತರಿಗೆ ಹೋಮ್ ಐಸೊಲೇಷನ್ ಸೇರಿದಂತೆ ತಾಲೂಕಿನ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಹಾಗೂ ಜಿಲ್ಲಾ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ದಾಖಲೆ ಸಂಖ್ಯೆಯಲ್ಲಿ ಸುಮಾರು 50,825 ಜನ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದಾರೆ. ಇದುವರೆಗೆ 42 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.