ಚಿಕ್ಕಬಳ್ಳಾಪುರ:ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಝಾನ್ಸಿ ಕ್ರೀಡಾಂಗಣದ ಬಳಿ ಶವ ಪತ್ತೆಯಾಗಿದ್ದು, ಮೃತನನ್ನು ಸುಬ್ರಮಣಿ (50) ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ - ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಮೃತದೇಹ ಪತ್ತೆ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಸುಬ್ರಮಣಿ ಎಂಬುವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಮೃತದೇಹ ಪತ್ತೆ
ಮೃತ ವ್ಯಕ್ತಿ ಚಿಂತಾಮಣಿ ನಗರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಪ್ರತಿನಿತ್ಯ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಆದರೆ ಇದೀಗ ಸುಬ್ರಮಣಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಈ ಸಾವಿನ ಸುತ್ತ ಅನುಮಾನಗಳ ಹುತ್ತವೇ ಬೆಳೆದಿದೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ, ಮೃತ ದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಭೋವಿ ಅಭಿವೃದ್ಧಿ ನಿಗಮದಲ್ಲಿ ಲೂಟಿಗೆ ಯತ್ನ ಆರೋಪ: ನಿಗಮ ಮಂಡಳಿ ನಿರ್ದೇಶಕನ ಬಂಧನಕ್ಕೆ ಪೊಲೀಸರ ಶೋಧ
Last Updated : May 4, 2022, 4:09 PM IST