ಚಿಕ್ಕಬಳ್ಳಾಪುರ :ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಕೊರೊನಾ ಸೋಂಕಿತ ಗ್ರಾಮಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದ್ದಾರೆ.
ಕೊರೊನಾ ಸೋಂಕಿತ ಗ್ರಾಮಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ - Chikkaballapur latest news
ಇಂದು ಗೌರಿಬಿದನೂರು ತಾಲೂಕಿನ ವಾಟದಹೊಸಳ್ಳಿ ಹಾಗೂ ಕೃಷ್ಣರಾಜಪುರ ಗ್ರಾಮದ ಮನೆ-ಮನೆಗೂ ತೆರಳಿ ಮಾಸ್ಕ್,ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಬಳಕೆ ಬಗ್ಗೆ ಅರಿವು ಮೂಡಿಸಿದರು..
![ಕೊರೊನಾ ಸೋಂಕಿತ ಗ್ರಾಮಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ Chikkaballapur District Collector latha Corona Awareness](https://etvbharatimages.akamaized.net/etvbharat/prod-images/768-512-8078250-771-8078250-1595078109329.jpg)
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಕೊರೊನಾ ಸೋಂಕಿತ ಗ್ರಾಮಗಳಿಗೆ ಭೇಟಿ ನೀಡಿ, ಕೊರೊನಾ ವಿರುದ್ಧ ಹೋರಾಡಲು ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಇಂದು ಗೌರಿಬಿದನೂರು ತಾಲೂಕಿನ ವಾಟದಹೊಸಳ್ಳಿ ಹಾಗೂ ಕೃಷ್ಣರಾಜಪುರ ಗ್ರಾಮದ ಮನೆ-ಮನೆಗೂ ತೆರಳಿ ಮಾಸ್ಕ್,ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಬಳಕೆ ಬಗ್ಗೆ ಅರಿವು ಮೂಡಿಸಿದರು. ಅಲ್ಲದೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯವರ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು.
ಇತ್ತಿಚೆಗಷ್ಟೇ ನೆರೆರಾಜ್ಯ ಆಂಧ್ರದ ಗಡಿ ಭಾಗದ ಚಿಂತಲಪಲ್ಲಿ ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ಸಂಗೀತ ವಂಶಸ್ಥರ ಗ್ರಾಮಕ್ಕೆ ಕಳಂಕ ಎಂಬ ಸುದ್ದಿಯನ್ನ ಈಟಿವಿ ಭಾರತ ವರದಿ ಮಾಡಿತ್ತು. ಇದರ ಬಗೆಗಿನ ಸತ್ಯಾಸತ್ಯತೆ ಪರೀಶಿಲಿಸಿ, ನೆರೆ ರಾಜ್ಯದ ಜನತೆಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು.