ಕರ್ನಾಟಕ

karnataka

ETV Bharat / state

ರೈತ ವಿರೋಧಿ ಕಾಯ್ದೆಗಳ ವಿರುದ್ಧ ಸತ್ಯಾಗ್ರಹ ಜತೆಗೆ ನಾಳೆ ವಿಧಾನಸೌಧ ಮುತ್ತಿಗೆ.. ಅನ್ನದಾತರಿಂದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು ಭಾಗಿಯಾಗುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗಿಯಾಗುವಂತೆ ಮನವಿ ಮಾಡಲಾಗಿದೆ..

Chikkaballapur Farmers demand repeal of anti-farmer act
ರೈತ ವಿರೋಧಿ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯ, ರೈತ ಸಂಘದಿಂದ ಪೂರ್ವಭಾವಿ ಸಭೆ

By

Published : Sep 20, 2020, 4:34 PM IST

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಸತ್ಯಾಗ್ರಹ ಹಾಗೂ ವಿಧಾನಸೌಧ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ರೈತರಿಗೆ ಕರೆ ನೀಡಿವೆ.

ರೈತ ವಿರೋಧಿ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯ, ರೈತ ಸಂಘದಿಂದ ಪೂರ್ವಭಾವಿ ಸಭೆ

ಬೆಂಗಳೂರಿನಲ್ಲಿ ಸೆಪ್ಟೆಂಬರ್ 21ರಂದು ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಎದುರು ಭೂ ಸುಧಾರಣಾ ಕಾಯ್ದೆ ಮತ್ತು ಸರ್ಕಾರ ಜಾರಿಗೆ ತಂದಿರುವ ವಿವಿಧ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ, ಅಹೋರಾತ್ರಿ ಸತ್ಯಾಗ್ರಹ ಹಾಗೂ ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ, ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು ಭಾಗಿಯಾಗುತ್ತಿದ್ದಾರೆ.

ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಭಾಗಿಯಾಗಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಇಂದು ಶಿಡ್ಲಘಟ್ಟ ನಗರದ ರೈತ ಸಂಘದ ಕಚೇರಿಯಲ್ಲಿ ಮನವಿ ಮಾಡಿದರು.

ABOUT THE AUTHOR

...view details