ಚಿಕ್ಕಬಳ್ಳಾಪುರ / ಚಿಂತಾಮಣಿ : ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮುರಗಮಲ್ಲಾ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಆವರಣದಲ್ಲಿ ಭಕ್ತಾದಿಗಳು ಅಮಾವಾಸ್ಯೆಯ ರಾತ್ರಿ ಬಂದು ಇಲ್ಲಿ ನೆಲೆಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ವಕ್ಫ್ ಅಧಿಕಾರಿಯಾದ ನವೀದ್ ಪಾಷಾ ಸ್ಪಷ್ಟಪಡಿಸಿದ್ದಾರೆ.
ಅಮಾವಾಸ್ಯೆ ದಿನದಂದು ದರ್ಗಾಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದರು. ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ ನಂತರ ದರ್ಗಾ ಬಂದ್ ಮಾಡಲಾಗಿತ್ತು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆದೇಶದ ಮೇರೆಗೆ 8 ಜೂನ್ ನಿಂದ ದರ್ಗಾ ಬಾಗಿಲುಗಳು ತೆರೆಯಲಾಗಿದ್ದು, ದರ್ಗಾಗೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ.