ಚಿಂತಾಮಣಿ/ಚಿಕ್ಕಬಳ್ಳಾಪುರ: ಏಪ್ರಿಲ್ 22ರಂದು ಸಿಡಿಲು ಬಡಿದ ಪರಿಣಾಮ ಚಪ್ಪಡಿಕಲ್ಲಿನ ಮನೆ ಕುಸಿದು ಬಿದ್ದು ಮನೆಯಲ್ಲಿದ್ದ ಒಂದೇ ಕುಟುಂಬದ 4 ಜನ ಮಕ್ಕಳು ಸೇರಿ 7 ಜನ ಗಂಭೀರವಾಗಿ ಗಾಯಗೊಂಡಿದ್ದವರ ಪೈಕಿ ಇಂದು ಇಬ್ಬರು ಮೃತಪಟ್ಟಿದ್ದಾರೆ.
ಸಿಡಿಲು ಬಡಿದ ಪರಿಣಾಮ ನಡೆದ ದುರಂತ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಸಂಜೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮನೆಯ ಮೇಲೆ ಸಿಡಿಲು ಬಡಿದ ಪರಿಣಾಮ ಒಂದೇ ಕುಟುಂಬದ 7 ಜನ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ತಂದೆ, ಮಗ ಮೃತಪಟ್ಟಿದ್ದಾರೆ.
ಘಟನೆಯ ನಂತರ ಚಿಂತಾಮಣಿ ಆಸ್ಪತ್ರೆಯಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಬಾಲಕ ಗೌತಮ್ (4) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದು, ಭಾನುವಾರ ಸಂಜೆ ತಂದೆ ಅಂಬರೀಶ್ (35) ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದಂತೆ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ