ಕರ್ನಾಟಕ

karnataka

ETV Bharat / state

ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಿದ್ದರಾಮಯ್ಯ - ಡಿ ಕೆ ಶಿವಕುಮಾರ್​

ವೇದಿಕೆ ಕಾರ್ಯಕ್ರಮದ ನಡುವೆ ಮಳೆ ಬಂದ ಕಾರಣ ಡಿ ಕೆ ಶಿವಕುಮಾರ್​ ತಮ್ಮ ಭಾಷಣವನ್ನು ಮೊಟಕುಗೊಳಿಸಬೇಕಾಯಿತು.

Etv Bharatchikkaballapur-siddaramaiah-and-d-k-sivakumar-bike-rally
ಸಿದ್ದರಾಮಯ್ಯ

By

Published : Aug 6, 2022, 11:07 PM IST

ಚಿಕ್ಕಬಳ್ಳಾಪುರ :ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರೋ ಪಾದಯಾತ್ರೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಆಗಮಿಸಿದ್ದರು. ಇಬ್ಬರು ನಾಯಕರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ಚಿಂತಾಮಣಿ ಬೆಂಗಳೂರು ರಸ್ತೆಯ ಟೋಲ್ ಗೇಟ್ ಬಳಿಯೇ ಜೆಸಿಬಿ ಮೂಲಕ ಹೂವಿನ ಸುರಿಮಳೆ ಹಾಗೂ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತ ಕೋರಿದ್ದಾರೆ.

ಈ ವೇಳೆ ರೋಡ್​ ಶೋನಲ್ಲಿ ಮಾನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್​ನವರು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಅನೇಕ ಸ್ವಾತಂತ್ರ್ಯ ಹೋರಾಟಗಾರು ಸೆರೆಯಾಗಲು, ಜೈಲು ವಾಸ ಅನುಭವಿಸಲು ಅವರು ಕಾರಣ. ನಾವಿಂದು ಸ್ವಾತಂತ್ರ್ಯ ಆಗಿರುವುದು ನಮಗೆ ಕಾಂಗ್ರೆಸ್​ ಕಾಂಗ್ರೆಸ್​ ಕೊಟ್ಟ ಕೊಡುಗೆಯಿಂದ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಮತ್ತು ಆರ್​ಎಸ್​ಎಸ್​ನವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು

ನಗರದ ಕಿಶೋರ್ ವಿದ್ಯಾ ಸಂಸ್ಥೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವ ಕೃಷ್ಣಬೈರೇಗೌಡ, ಎನ್ ಹೆಚ್ ಶಿವಶಂಕರ ರೆಡ್ಡಿ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಎದ್ದು ಭಾಷಣ ಮಾಡುತ್ತಿದ್ದಂತೆ ಜೋರಾಗಿ ಮಳೆ ಬಂದಿದ್ದರಿಂದ ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಇದನ್ನೂ ಓದಿ :ಸಿದ್ದರಾಮಯ್ಯ ಅಮೃತ ಮಹೋತ್ಸವ ಪಕ್ಷಕ್ಕೆ ಶಕ್ತಿ ಕೊಟ್ಟಿದೆ: ಸತೀಶ್ ಜಾರಕಿಹೊಳಿ

ABOUT THE AUTHOR

...view details