ಕರ್ನಾಟಕ

karnataka

ETV Bharat / state

ರೈಲ್ವೆ ಕೆಳಸೇತುವೆಗೆ ಡಿಕ್ಕಿ ಹೊಡೆದ ಕಾರು : ಮೂವರು ಸ್ಥಳದಲ್ಲೇ ಸಾವು - car accident : 3 were died, 2 were injured

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಾಸುದೇವ್ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..

chikkaballapura-car-accident-3-were-died-2-were-injured
ರೈಲ್ವೆ ಕೆಳಸೇತುವೆಗೆ ಢಿಕ್ಕಿ ಹೊಡೆದ ಕಾರು : ಮೂವರ ಸ್ಥಳದಲ್ಲೇ ಸಾವು

By

Published : Apr 23, 2022, 1:44 PM IST

ಚಿಕ್ಕಬಳ್ಳಾಪುರ: ರೈಲ್ವೆ ಕೆಳಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಜಾತವಾರ ಬಳಿಯ ಹೊಸಹಳ್ಳಿ ರೈಲ್ವೆ ಅಂಡರ್‌ ಪಾಸ್ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಕೆ.ಆರ್.ಪುರದ ಅರುಣ್ (39), ಎನ್‌ಆರ್‌ಐ ಲೇಔಟ್‌ನ ಶಿವಕುಮಾರ್ (29), ಸೋಮೇನಹಳ್ಳಿಯ ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿ ಗ್ರಾಮದ ಸಂಬಂಧಿಕರ ಮನೆಗೆ ತೆರಳಿ ವಾಪಸ್ ಆಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಸಹಳ್ಳಿ ಬಳಿ ಇರುವ ರೈಲ್ವೆ ಕೆಳ ಸೇತುವೆಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಾಸುದೇವ್ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ :ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ : ಕೆ.ಎಸ್.ಈಶ್ವರಪ್ಪ ವಿಶ್ವಾಸ

ABOUT THE AUTHOR

...view details