ಚಿಕ್ಕಬಳ್ಳಾಪುರ: ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಇದುವರೆಗೂ 30 ಪ್ರಕರಣಗಳು ಮಾತ್ರ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದವು. ಆದರೆ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಿಂದ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯಲ್ಲಿ ಒಂದೇ ದಿನ 45 ಪ್ರಕರಣಗಳು ದಾಖಲಾಗಿವೆ.
ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವರು, ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಿಂದ ನನಗೆ ನಿದ್ದೆ ಬರುತ್ತಿಲ್ಲಾ ಎಂದು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಕೊರೊನಾ ಸ್ಫೋಟಗೊಂಡಿದ್ದು, ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿದೆ.
ಚಿಕ್ಕಬಳ್ಳಾಪುರದಲ್ಲಿ 45 ಪಾಸಿಟಿವ್ ಪ್ರಕರಣ ಪತ್ತೆ ಮತ್ತೆ ಹಾಟ್ ಸ್ಪಾಟ್ ಆದ ಗೌರಿಬಿದನೂರು
ನಗರದಿಂದ ಮೆಕ್ಕಾ ಪ್ರಯಾಣ ಬೆಳೆಸಿದ್ದ ಕುಟುಂಬಸ್ಥರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ನಂತರ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಕೊರೊನಾ ಮುಕ್ತವಾಗಿದ್ದ ಗೌರಿಬಿದನೂರು ಈಗ ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಂಡಿದೆ.
ಸದ್ಯ ಮಹಾರಾಷ್ಟ್ರದ ನಂಟು ಮತ್ತಷ್ಟು ಏರಿಕೆಯಾಗುವ ಲಕ್ಷಣ ಗೋಚರವಾಗುತ್ತಿದೆ. ಒಂದೇ ದಿನ 45 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಸದ್ಯ ಎಲ್ಲಾ ಸೋಂಕಿತರು ಜಿಲ್ಲೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.