ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಬೋದಗೂರಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ - ಜಿಲ್ಲಾಧಿಕಾರಿಗಳ ಆರ್.ಲತಾ ಗ್ರಾಮ ವಾಸ್ತವ್ಯ

ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಗ್ರಾಮ ವಾಸ್ತವ್ಯ ನಡೆಸಿ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ಕಾರ್ಯ ಮಾಡಿದರು.

chikkaballapura-dc-village-stay-program-in-bodaguru
ಗ್ರಾಮ ವಾಸ್ತವ್ಯ

By

Published : Feb 20, 2021, 7:38 PM IST

ಚಿಕ್ಕಬಳ್ಳಾಪುರ:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಹಮ್ಮಿಕೊಂಡಿರುವ 'ಜಿಲ್ಲಾಧಿಕಾರಿ ನಡೆ ಗ್ರಾಮಗಳ ಕಡೆ' ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಇಂದು ಚಾಲನೆ ನೀಡಿದರು.

ಬೋದಗೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಾಲನೆ

ಗ್ರಾಮದ ಸರ್ಕಾರಿ ಪ್ರಾಥಮಿಕ ಆವರಣದಲ್ಲಿ ಗಿಡ ನೆಟ್ಟು, ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಗ್ರಾಮದಲ್ಲಿ ಸಂಚರಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬೋದಗೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳಾದ ಎ.ಎನ್.ರಘುನಂದನ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details