ಕರ್ನಾಟಕ

karnataka

ETV Bharat / state

ಸರ್ಕಾರಿ ಆಸ್ಪತ್ರೆಗಳಿಗೆ ಅಲೆದಾಟವೇಕೆ: ನಿಮ್ಮೂರಲ್ಲೇ ಸಿಗಲಿದೆ 'ಆಯುಷ್ಮಾನ್‌ ಕಾರ್ಡ್‌' - ಗುಡಿಬಂಡೆ ಕೇಂದ್ರ ಆಯುಷ್ಮಾನ್ ಕಾರ್ಡ್​ ಸುದ್ದಿ

ಎಲ್ಲರೂ ಆರೋಗ್ಯವಂತರಾಗಿ ಬದುಕಬೇಕು ಎಂಬ ದೂರದೃಷ್ಟಿ ಇಟ್ಟುಕೊಂಡು ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ತಂದಿದೆ. ಇದನ್ನು ಜಿಲ್ಲೆಯ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕಿನ ಗ್ರಾಮ ಪಂಚಾಯತ್​ ಪಿಡಿಓಗಳಿಗೆ ತಹಶಿಲ್ದಾರ್ ಹನುಮಂತರಾಯಪ್ಪ ತಿಳಿಸಿದರು.

chikkaballapura-gudibande-villagers-can-get-ayushman-card
ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್

By

Published : Dec 26, 2019, 8:37 AM IST

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕು ಕಚೇರಿಯಲ್ಲಿ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್​ನ್ನು ಹಳ್ಳಿಯಲ್ಲಿ ವಿತರಣೆ ಮಾಡುವ ಕುರಿತು ತಹಶಿಲ್ದಾರ್ ಹನುಮಂತರಾಯಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಕೇಂದ್ರ ಸರ್ಕಾರ ಬಡವರು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಆರೋಗ್ಯವಂತರಾಗಿ ಬದುಕಬೇಕು ಎಂಬ ದೂರದೃಷ್ಟಿ ಇಟ್ಟುಕೊಂಡು ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ತಂದಿದೆ. ಇದನ್ನು ಜಿಲ್ಲೆಯ ಜನತೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕಿನ ಗ್ರಾಮ ಪಂಚಾಯತ್​ ಪಿಡಿಓಗಳಿಗೆ ತಿಳಿಸಿದರು.

ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಕುರಿತ ಸಭೆ

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕದ ಕಾರ್ಡ್‌ಗಳನ್ನು ಪಡೆಯಲು ಇನ್ಮುಂದೆ ಸರ್ಕಾರಿ ಆಸ್ಪತ್ರೆಗೆ ಅಲೆಯುವ ಅಗತ್ಯವಿಲ್ಲ. ಗ್ರಾಮ ಪಂಚಾಯತ್​ ವ್ಯಾಪ್ತಿಯ ‘ಬಾಪೂಜಿ ಸೇವಾ ಕೇಂದ್ರದಲ್ಲಿ ಕಾರ್ಡ್‌ ವಿತರಿಸುವ ಅಭಿಯಾನ ಆರಂಭವಾಗಲಿದೆ ಎಂದು ತಹಶಿಲ್ದಾರ್ ತಿಳಿಸಿದರು.

For All Latest Updates

TAGGED:

ABOUT THE AUTHOR

...view details