ಕರ್ನಾಟಕ

karnataka

ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಭಿತ್ತಿ ಪತ್ರ ಅಂಟಿಸಿ ಆಕ್ರೋಶ - ಚಿಕ್ಕಬಳ್ಳಾಪುರ ಪೌರತ್ವ ವಿರೋಧ ಬಿತ್ತಿ ಪತ್ರ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಬಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಅಲ್ಲದೆ ಹಲವು ಅಂಗಡಿಗಳಿಗೆ ಬಿತ್ತಿ ಪತ್ರಗಳನ್ನು ಅಂಟಿಸುವ ವೇಳೆ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

chikkaballapura-shidlaghatta-citizenship-commandment-bill-poster
ಪೌರತ್ವ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಬಿತ್ತಿ ಪತ್ರ ಅಂಟಿಸಿ ಆಕ್ರೋಶ

By

Published : Dec 24, 2019, 8:11 AM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಂಗಡಿ, ಮುಂಗಟ್ಟುಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ವಿರೋಧ ವ್ಯಕ್ತಪಡಿಸಲಾಗಿದೆ.

ನಗರದ, ಬಸ್ ನಿಲ್ದಾಣ, ಟಿ ಬಿ ರೋಡ್, ಕೋಟೆ ಸರ್ಕಲ್ ಸೇರಿದಂತೆ ಹಲವೆಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಲವು ಅಂಗಡಿಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವಾಗ ಅಂಗಡಿಗಳ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸಿ ಶಿಡ್ಲಘಟ್ಟದಲ್ಲಿ ಭಿತ್ತಿ ಪತ್ರ ಅಂಟಿಸಿ ಆಕ್ರೋಶ

ಇನ್ನು ಇಂದು ಜಿಲ್ಲಾ ಬಂದ್​ಗೆ ಕರೆ ನೀಡಿರುವ ಮುಸ್ಲಿಂ ಫೋರಂ ಹಾಗೂ ವಿವಿಧ ಸಂಘಟನೆಗಳು ಬೀದಿಗೆ ಇಳಿಯಲಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಂದರೆಯಾಗದಂತೆ ಮೂನ್ಸೂಚನೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ 4 ಕೆ ಎಸ್ ಆರ್ ಪಿ, 9 ಡಿಎಆರ್ ತುಕಡಿ ಮತ್ತು 200 ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದೆ.

For All Latest Updates

ABOUT THE AUTHOR

...view details