ಚಿಕ್ಕಬಳ್ಳಾಪುರ:ಸಾಂಕ್ರಾಮಿಕ ರೋಗಗಳು ಹರಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗುಡಿಬಂಡೆಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ನಗರದ ಮುಖ್ಯರಸ್ತೆಗಳು ಹಾಗೂ ಎಲ್ಲ ವಾರ್ಡ್ಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಿತು.
ಸಾಂಕ್ರಾಮಿಕ ರೋಗ ತಡೆಗೆ ಶಾಲಾ ಮಕ್ಕಳಿಂದ ಸ್ವಚ್ಛತೆ - viral disease
ಸಾಂಕ್ರಾಮಿಕ ರೋಗ ತಡೆ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಿತು.
ಸಾಂಕ್ರಾಮಿಕ ರೋಗ
ಈಗಾಗಲೇ ಗುಡಿಬಂಡೆ ಪಟ್ಟಣದಲ್ಲಿ ಬಹಳಷ್ಟು ಸಾಂಕ್ರಾಮಿಕ ರೋಗಗಳು ಹರಡಿವೆ. ಹೀಗಾಗಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಮುಖ್ಯರಸ್ತೆ ಹಾಗೂ ಎಲ್ಲಾ ವಾರ್ಡ್ ಳಿಗೂ ತೆರಳಿದ್ದರು. ಎಲ್ಲ ವಾರ್ಡ್ಗಳಲ್ಲಿ ಬೀದಿ ಬೀದಿಗೂ ತೆರಳಿ ಮಕ್ಕಳು, ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಔಷಧ ಸಿಂಪರಣೆ ಮಾಡಿದ್ದಲ್ಲದೆ, ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಸಾಯಿ ವಿದ್ಯಾನಿಕೇತನ ಹಾಗೂ ನ್ಯೂ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.