ಕರ್ನಾಟಕ

karnataka

ETV Bharat / state

ಗ್ರಾಮೀಣ ಜನತೆಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದ ಆಶಾ ಕಾರ್ಯಕರ್ತೆಯರು - ಸ್ವಚ್ಛತೆ ಅರಿವು ಕಾರ್ಯಕ್ರಮ

ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಚಾಕವೇಲು ಗ್ರಾಮದಲ್ಲಿ ಮಲೇರಿಯಾ ‌ಮಾಸಾಚರಣೆ ನಿಮಿತ್ತ ಸ್ವಚ್ಛತೆ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Bhagepalli
Bhagepalli

By

Published : Jun 27, 2020, 12:53 PM IST

ಬಾಗೇಪಲ್ಲಿ:ಸ್ಚಚ್ಛತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಮಲೇರಿಯಾ, ಕೊರೊನಾದಂತಹ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಚಾಕವೇಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ‌. ರಾಘವೇಂದ್ರ ಹೇಳಿದರು.

ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ ‌ಮಾಸಾಚರಣೆ ಕಾರ್ಯಕ್ರಮದ ನಿಮಿತ್ತ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ‌. ರಾಘವೇಂದ್ರ ಮಾತನಾಡಿ, ತೆಂಗಿನ ಚಿಪ್ಪು, ಪ್ಲಾಸ್ಟಿಕ್‌ ಡಬ್ಬಿ ಸೇರಿದಂತೆ ನಿಂತ ನೀರಿನ ತಾಣಗಳು ಸೊಳ್ಳೆ ಉತ್ಪತ್ತಿಯ ಕೇಂದ್ರವಾಗಿರುತ್ತವೆ. ಆದ್ದರಿಂದ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದರು.

ABOUT THE AUTHOR

...view details