ಚಿಕ್ಕಬಳ್ಳಾಪುರ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ನಡೆದಿದೆ.
ಪ್ರತಿಭಟನೆ ಮುಗಿಸಿ ವಾಪಸಾಗುವಾಗ ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - collision between cars in chickballapura latest news
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುವಾಗ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ಮಂದಿಯ ಪೈಕಿ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 7ರ ವರ್ಲಕೊಂಡ ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಗೊಂಡವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪೆತ್ರೆಯಲ್ಲಿ ದಾಖಲಿಸಲಾಗಿದೆ.
Last Updated : Dec 24, 2019, 7:31 PM IST