ಚಿಕ್ಕಬಳ್ಳಾಪುರ:ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬಳಿ ನಡೆಯಿತು. ಮೃತರನ್ನು ಮಳಮಾಚನಹಳ್ಳಿ ಗ್ರಾಮದ ಕೃಷ್ಣಮೂರ್ತಿ (45) ಹಾಗೂ ಚಿಕ್ಕದಾಸರಹಳ್ಳಿಯ ಅಭಿಲಾಶ್ (24) ಎಂದು ಗುರುತಿಸಲಾಗಿದೆ.
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಇನ್ನಿಬ್ಬರು ಗಂಭೀರ - ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ
ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬಳಿ ನಡೆದಿದೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರ ಸಾವು
ಚಿಕ್ಕದಾಸರಹಳ್ಳಿಯ ಭರತ್ ಹಾಗೂ ಮಳಮಾಚನಹಳ್ಳಿಯ ರಘು ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಸುಡುಬಿಸಿಲಿಗೆ ಉ.ಕರ್ನಾಟಕ ತತ್ತರ: ಮುಂದಿನ 3 ದಿನ ಅಧಿಕ ಉಷ್ಣಾಂಶದ ಎಚ್ಚರಿಕೆ