ಚಿಕ್ಕಬಳ್ಳಾಪುರ:ಅಪರಿಚಿತ ವಾಹನ ಮತ್ತು ಆಟೋ ನಡುವೆ ಡಿಕ್ಕಿಯಾದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
ಅಪರಿಚಿತ ವಾಹನ ಮತ್ತು ಆಟೋ ನಡುವೆ ಡಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ - ಚಿಕ್ಕಬಳ್ಳಾಪುರ ಅಪರಾಧ ಸುದ್ದಿ
ಅಪರಿಚಿತ ವಾಹನ ಮತ್ತು ಆಟೋ ನಡುವೆ ಡಿಕ್ಕಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ.
ಅಪಘಾತ
ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನ ಹತ್ತಿರದ ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದ್ದು, ಆಂಧ್ರ ಕಡೆಯಿಂದ ಬಂದ ಅಪರಿಚಿತ ವಾಹನ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.