ಚಿಕ್ಕಬಳ್ಳಾಪುರ : ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಮತ್ತು ಆರೋಗ್ಯ ಉಪಕರಣಗಳ ಖರೀದಿಯಲ್ಲಿ ನಡೆದ ಅವ್ಯವಹಾರದ ತನಿಖೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್ನಿಂದ ಪ್ರತಿಭಟನೆ - ಚಿಕ್ಕಬಳ್ಳಾಪುರ ಕಾಂಗ್ರೆಸ್ನಿಂದ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ
ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್ನಿಂದ ಪ್ರತಿಭಟನೆ
ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಯ್ದೆಗಳ ತಿದ್ದುಪಡಿ ಮಾಡಿ ಕಾರ್ಪೋರೇಟ್ ಕ್ಷೇತ್ರಕ್ಕೆ ಸರ್ಕಾರ ಲಾಭ ಮಾಡಿಕೊಡುತ್ತಿದೆ. ಆದ್ದರಿಂದ, ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ , ಮುಖಂಡರಾದ ಎಂ.ಆಂಜಿನಪ್ಪ , ನವೀನ್ ಕಿರಣ್, ಯಲುವಳ್ಳಿ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.