ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ, ಕೊರೊನಾ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.
ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ: ರೆಡ್ ಕ್ರಾಸ್ ಜನಜಾಗೃತಿ - Indian Red Cross
ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್ ಕ್ರಾಸ್ ವತಿಯಿಂದ, ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಕೊರೊನಾ ಬಗ್ಗೆ ಜನಜಾಗೃತಿ ಕಾರ್ಯಕ್ರಮ
"ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ" ಎಂಬ ಧ್ಯೇಯದೊಂದಿಗೆ ಹಾಗೂ ಇದರಿಂದ ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ, ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಎಂ. ನಾಗರಾಜ್ ಅವರು, ಬಾಗೇಪಲ್ಲಿಯ 5 ಹೋಬಳಿಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯ ಪ್ರತಿಯೊಂದು ಗ್ರಾಮದಲ್ಲಿಯೂ, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.