ಚಿಕ್ಕಬಳ್ಳಾಪುರ: ಜಿಲ್ಲೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಜಿಲ್ಲಾಧಿಕಾರಿಗಳು ಮುಂಜಾಗ್ರತ ಕ್ರಮಕೈಗೊಂಡಿದ್ದು, ವಿಶ್ವ ಪ್ರಖ್ಯಾತ ನಂದಿ ಬೆಟ್ಟಕ್ಕೆ ಒಂದು ವಾರಗಳ ಕಾಲ ನಿಷೇಧವನ್ನು ಹೇರಲಾಗಿದೆ.
ಕೊರೊನಾ ಭೀತಿ: ಒಂದು ವಾರ ನಂದಿ ಬೆಟ್ಟಕ್ಕಿಲ್ಲ ಪ್ರವೇಶ - ನಂದಿ ಬೆಟ್ಟಕ್ಕೂ ಕೊರೊನಾ ಭೀತಿ
ಕೊರೊನಾ ಭೀತಿ ಹಿನ್ನೆಲೆ ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಒಂದು ವಾರ ನಿಷೇಧವನ್ನು ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ಒಂದು ವಾರ ನಂದಿ ಬೆಟ್ಟಕ್ಕಿಲ್ಲ ಪ್ರವೇಶ
ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ದಿನಾಂಕ ಮಾರ್ಚ್ 14 ರಿಂದ 23ರ ವರೆಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಒಂದು ವಾರ ನಂದಿ ಬೆಟ್ಟಕ್ಕಿಲ್ಲ ಪ್ರವೇಶ
ಸಾರ್ವತ್ರಿಕ ರಜೆ ದಿನಗಳಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಪರಿಸರ ಪ್ರೇಮಿಗಳು ನಂದಿ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದರು. ಶಾಲಾ- ಕಾಲೇಜುಗಳಿಗೆ ರಜೆ ಇರುವ ಕಾರಣ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಹಿನ್ನೆಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ.