ಚಿಕ್ಕಬಳ್ಳಾಪುರ: ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೋಂಡಿದ್ದ 10 ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲೆಯಿಂದ ಮೇಕೆದಾಟು ಪಾದಯಾತ್ರೆಯ ಭದ್ರತೆಯ ಸಲುವಾಗಿ ಅಧಿಕಾರಿಗಳು, ಸಿಬ್ಬಂದಿ ಸೇರಿ ಒಟ್ಟು 125 ಮಂದಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು. ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಂಡ ಹಿನ್ನೆಲೆ, ವಾಪಸ್ ಬಂದ ಪೊಲೀಸ್ ಸಿಬ್ಬಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 10 ಮಂದಿಗೆ ಕೋವಿಡ್ ತಗುಲಿದೆ.