ಚಿಕ್ಕಬಳ್ಳಾಪುರ: ನಗರದಲ್ಲಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢ
17ನೇ ವಾರ್ಡ್ ರೋಗಿ ನಂ.250ರ ಸಂಪರ್ಕದಲ್ಲಿದ್ದ 36, 20 ಹಾಗೂ 9 ವರ್ಷದವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢ
ನಗರದ 17ನೇ ವಾರ್ಡ್ ರೋಗಿ ನಂ.250ರ ಸಂಪರ್ಕದಲ್ಲಿದ್ದ 36, 20 ಹಾಗೂ 9 ವರ್ಷದವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಮೂವರು ಸೋಂಕಿತರು ನಗರದ ಹಳೇ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಈಗಾಗಲೇ ನಗರದ ವಾರ್ಡ್ ನಂಬರ್ 17 ಸೀಲ್ಡೌನ್ ಮಾಡಲಾಗಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಸದ್ಯ ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದ ಜನತೆ ಹಾಗೂ ಜಿಲ್ಲೆಯ ಜನತೆಗೆ ಮತ್ತಷ್ಟು ಆತಂಕ ಹೆಚ್ಚಿದೆ.