ಕರ್ನಾಟಕ

karnataka

ETV Bharat / state

ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಮೂವರಲ್ಲಿ ಕೊರೊನಾ! - ಕೊರೊನಾ ವಿರುದ್ಧ ಹೋರಾಟ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತವರು ಜಿಲ್ಲೆಯಾದ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

coronavirus-is-the-strongest-of-the-three-chikkaballapur
ಕೊರೊನಾ ವೈರಸ್​​

By

Published : Mar 24, 2020, 4:20 PM IST

ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ತವರು ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ತಾಯಿ ಹಾಗೂ ಸಹೋದರನ ಜೊತೆ ಮೆಕ್ಕಾಗೆ ತೆರಳಿದ್ದ ಮಹಿಳೆಗೆ ಸೋಂಕು ತಗುಲಿದೆ.

ಸರ್ಕಾರ ಬಿಡುಗಡೆ ಮಾಡಿರುವ ವರದಿ

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್​​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಚ್ 14ರಂದು ಮೆಕ್ಕಾದಿಂದ ಹೈದರಾಬಾದ್​​​​ಗೆ ಮಹಿಳೆ ಆಗಮಿಸಿದ್ದರು. ಮಾ. 16ರಂದು ಮಹಿಳೆ ಗೌರಿಬಿದನೂರಿಗೆ ಬಂದಿದ್ದರು ಎನ್ನಲಾಗಿದೆ.

ABOUT THE AUTHOR

...view details