ಚಿಕ್ಕಬಳ್ಳಾಪುರ: ಜಗತ್ತನ್ನೇ ಬೆಚ್ಚಿ ಬೀಳಿಸಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 19 ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ: ಡಾ.ಕೆ.ಸುಧಾಕರ್ - ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್
ಜಗತ್ತನ್ನೇ ಬೆಚ್ಚಿ ಬೀಳಿಸಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 19 ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.
ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಒಬ್ಬರಿಗೆ ಕೊವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಗೌರಿಬಿದನೂರಿನಲ್ಲಿ ವಿಶೇಷವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಿನ್ನೆಯವರೆಗೆ ಸೋಂಕಿತರ ಸಂಖ್ಯೆ 15 ಇತ್ತು. ಇಂದು ಮತ್ತೆ ನಾಲ್ವರಲ್ಲಿ ಸೋಂಕು ಕಂಡುಬಂದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19 ಕ್ಕೆ ಏರಿದೆ ಎಂದರು.
Last Updated : Mar 21, 2020, 3:51 PM IST