ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋ ಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದರು.