ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ - CPM protests demanding various demands

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಎಲ್ಲಾ 8 ಗ್ರಾ.ಪಂ. ಮುಂಭಾಗ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪಕ್ಷದ ಕಾರ್ಯಕರ್ತರು ಪಿಡಿಒಗೆ ಮನವಿ ಪತ್ರ ನೀಡಿದರು.

CPM protests demanding various demands
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ

By

Published : Jun 17, 2020, 2:37 AM IST

ಗುಡಿಬಂಡೆ : ಕೋವಿಡ್-19 ಹಾವಳಿಯಿಂದ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಎಲ್ಲಾ ಗ್ರಾ.ಪಂ. ಕಚೇರಿ ಮುಂಭಾಗ ಸಿಪಿಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಿಪಿಎಂ ಪಕ್ಷದ ಮುಖಂಡ ಹೆಚ್.ಪಿ.ಲಕ್ಷ್ಮೀನಾರಾಯಣ, ಕೊರೊನಾ ದಾಳಿಯಿಂದಾಗಿ ಇಡೀ ದೇಶದ ಬಡಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಲಿಯಿಲ್ಲದೆ ಊಟಕ್ಕೂ ಸಹ ಪರದಾಡುವಂತಾಗಿದೆ. ಯಾವುದೇ ಮುನ್ಸೂಚನೆ ನೀಡದೇ ಲಾಕ್‍ಡೌನ್ ಮಾಡಿದ್ದರಿಂದ ವಲಸೆ ಕಾರ್ಮಿಕರು ಬೀದಿಗೆ ಬಂದಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪ್ರತಿಭಟನೆ

ಕೆಲಸವಿಲ್ಲದೇ ತಮ್ಮ ಊರುಗಳಿಗೆ ವಾಪಸ್ಸಾಗುವ ವೇಳೆ ಅನೇಕರು ಮರಣ ಹೊಂದಿದ್ದಾರೆ. ಕಾರ್ಮಿಕರನ್ನು ಕ್ಷೇಮವಾಗಿ ಅವರ ಮನೆಗಳಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇಷ್ಟಾದರೂ ಕೂಡ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

ಇದರ ಜೊತೆಗೆ ಬಡವರ ಸಹಾಯಕ್ಕೆ ಬರುವ ಬದಲಿಗೆ ಜನವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ತಂದು ಬಡವರ್ಗದ ಜನತೆಯನ್ನು ಇನಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತಿದೆ ಎಂದರು.

ಕರ್ನಾಟಕದಲ್ಲಿನ ಎಲ್ಲಾ ಆಸ್ಪತ್ರೆಗಳಿಗೆ ಕೊರೊನಾ ತಡೆಗಟ್ಟಲು ಬೇಕಾಗುವ ಎಲ್ಲಾ ವೈದ್ಯಕೀಯ ಉಪಕರಣಗಳನ್ನು, ಅಗತ್ಯ ಔಷಧಗಳನ್ನು ನೀಡಿ ಎಲ್ಲರಿಗೂ ಉಚಿತ ತಪಾಸಣೆ ಮಾಡುವುದು, ಬಿಪಿಎಲ್ ಕುಟುಂಬಗಳಿಗೆ ಕನಿಷ್ಟ 7500 ರೂಪಾಯಿಗಳ ಪರಿಕರಗಳ ವಿತರಣೆ, ಆರು ತಿಂಗಳುಗಳ ಕಾಲ ಪ್ರತಿ ವ್ಯಕ್ತಿಗೆ ಕನಿಷ್ಟ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುವುದು, ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ಸು ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ 8 ಗ್ರಾ.ಪಂ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಿದರು.

ABOUT THE AUTHOR

...view details