ಚಿಕ್ಕಬಳ್ಳಾಪುರ:ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಗಸಂದ್ರ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವಳ ಮೃತದೇಹ ಪತ್ತೆಯಾಗಿದೆ.
ಚಿಂತಾಮಣಿ ಬಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ - ಚಿಕ್ಕಬಳ್ಳಾಪುರ ಲೇಟೆಸ್ಟ್ ನ್ಯೂಸ್
ಸ್ಥಳೀಯರು ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆ ಶವವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕಳೆದ 5 ದಿನಗಳ ಹಿಂದೆ ಕೊಲೆಯಾಗಿದ್ದು ಸುಮಾರು 45 ವರ್ಷದ ಅಪರಿಚಿತ ಮಹಿಳೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಶವ ಪತ್ತೆ
ಸ್ಥಳೀಯರು ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆ ಶವವನ್ನು ಕಂಡು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಕಳೆದ 5 ದಿನಗಳ ಹಿಂದೆ ಕೊಲೆಯಾಗಿದ್ದು ಸುಮಾರು 45 ವರ್ಷದ ಅಪರಿಚಿತ ಮಹಿಳೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಕೊಲೆಯಾದ ಮಹಿಳೆಯ ಮೇಲೆ ಸುಟ್ಟ ಗಾಯಗಳು ಹಾಗೂ ಬಟ್ಟೆಗಳಿಲ್ಲದೆ ಕಂಡು ಬಂದಿದ್ದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಾಂತರ ಠಾಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.