ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ರೇಷ್ಮೆ ಹುಳು ಸಾಕಣೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ - ಚಿಕ್ಕಬಳ್ಳಾಪುರದಲ್ಲಿ ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕುತಂಡಹಳ್ಳಿ ಗ್ರಾಮದಲ್ಲಿ ರೇಷ್ಮೆ ಸಾಕಾಣಿಕೆ‌ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

By

Published : Feb 2, 2022, 10:39 AM IST

ಚಿಕ್ಕಬಳ್ಳಾಪುರ :ರೇಷ್ಮೆ ಸಾಕಾಣಿಕೆ‌ ಮನೆಯಲ್ಲಿ ಪ್ಲಾಸ್ಟಿಕ್ ದಾರದಿಂದ ನೇಣು ಬಿಗಿದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕುತಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕಾಶ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪ್ರಕಾಶ್ ಮೃತ ವ್ಯಕ್ತಿ

ಇಂದು ಬೆಳಗ್ಗೆ ರೇಷ್ಮೆ ಸಾಕಾಣಿಕೆ‌ ಮನೆ ಕಡೆ ಹೋಗಿದ್ದ ಪ್ರಕಾಶ್, ಸುಮಾರು ಸಮಯವಾದರು ರೇಷ್ಮೆ ಹುಳು ಸಾಕಾಣಿಕೆ ಮನೆಯಿಂದ ಹೊರಗಡೆ ಬಾರದ ಹಿನ್ನೆಲೆ ಪ್ರಕಾಶ್ ಪತ್ನಿ ಹುಳು ಮನೆಗೆ ಹೋಗಿ ನೋಡಿದಾಗ ಪ್ರಕಾಶ್ ಪ್ಲಾಸ್ಟಿಕ್ ದಾರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡಿದೆ.

ಇದರಿಂದ ಗಾಬರಿಗೊಂಡ ಪ್ರಕಾಶ್ ಪತ್ನಿ ಕಿರುಚಾಡಿಕೊಂಡಿದ್ದಾರೆ. ಇವರ ಕಿರಿಚಾಟಕ್ಕೆ, ಅಕ್ಕಪಕ್ಕದವರು ಬಂದು ನೋಡಿದಾಗ ನೇಣು ಬಿಗಿದ ರೀತಿಯಲ್ಲಿ ವ್ಯಕ್ತಿಯ ಶವ ಕಂಡಿದೆ. ನಂತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು :ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ABOUT THE AUTHOR

...view details