ಚಿಕ್ಕಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಚಂದಂದೂರು ಗ್ರಾಮದ ನಾಗರಾಜ್(40) ಎಂದು ತಿಳಿದು ಬಂದಿದೆ. ಮುಖ್ಯ ರಸ್ತೆಯ ಖಾಸಗಿ ಜಮೀನೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಹಿಂದೆ ಹಲವು ಸಂಶಯಗಳು ಇವೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದಾರೆ. ಕಳೆದ ರಾತ್ರಿ ಮನೆಯಿಂದ ಹೊರಗೆ ಹೋದ ವ್ಯಕ್ತಿ ಮರಳಿ ಮನೆಗೆ ಹಿಂತಿರುಗದೇ ಇದ್ದುದರಿಂದ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ.