ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್ ನನ್ನ ಸ್ನೇಹಿತರು. ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರು ಎಂ ಬಿ ಪಾಟೀಲ್‌ರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ. ಬೇಕಾದರೆ ಆಗ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ಮುಖ್ಯಮಂತ್ರಿ ಮಾಡಿ ತುಂಬಾ ದಿನಗಳೇ ಆಗಿದೆ. ವೀರೇಂದ್ರ ಪಾಟೀಲ್ ಅವರ ಕಾಲಕ್ಕೆ ಸಿಎಂ ಲಿಂಗಾಯತ ಮುಗಿದು ಹೋಗಿದೆ. ಈಗ ಎಂ ಬಿ ಪಾಟೀಲ್ ಮುಂದಿನ ಸಿಎಂ ಅಭ್ಯರ್ಥಿ ಅಂತ ಘೋಷಿಸಲು ರಾಹುಲ್ ಗಾಂಧಿ ಅವರಿಗೆ ಹೇಳೋಕೆ ಹೇಳಿ. ಎಂ ಬಿ ಪಾಟೀಲ್ ಅವರಿಗೆ ಸಿಎಂ ಅಭ್ಯರ್ಥಿಯಾಗಲು ಅರ್ಹತೆ ಇಲ್ಲವಾ ಎಂದು ಪ್ರಶ್ನಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪನವರನ್ನು ಬಿಜೆಪಿಗೆ ಯಾವ ರೀತಿ ನಡೆಸಿಕೊಳ್ಳಬೇಕೆಂದು ಗೊತ್ತಿದೆ. ಬಿಎಸ್ವೈ ಮಾರ್ಗದರ್ಶನದಲ್ಲಿ ಇಡೀ ದೇಶದಲ್ಲಿ ಮಾದರಿಯಾಗುವಂತೆ ಪಕ್ಷ ಸಂಘಟನೆ ಮಾಡುತ್ತೇವೆ. ಸರ್ವೋಚ್ಛ ನಾಯಕ ಬಿಎಸ್ವೈ ಗೌರವಕ್ಕೆ ಕುಂದು ಕೊರತೆ ಬಾರದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.