ಚಿಕ್ಕಬಳ್ಳಾಪುರ: ಜಿಲ್ಲೆಯ ಗುಂಡ್ಲುಪೇಟೆಯ ದಲಿತ ಯವಕನನ್ನು ಬೆತ್ತಲೆಗೊಳಿಸಿ ಮರೆವಣಿಗೆ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘದ ಸದಸ್ಯರು ಜಿಲ್ಲೆಯ ಚಿಂತಾಮಣಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ದಲಿತ ಯುವಕನ ಬೆತ್ತಲೆ ಮೆರವಣಿಗೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ - ಚಿಕ್ಕಬಳ್ಳಾಪುರ
ದಲಿತರನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಮುಂದೆ ಇಂತಹ ಪ್ರಕರಣಗಳು ಜರುಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
![ದಲಿತ ಯುವಕನ ಬೆತ್ತಲೆ ಮೆರವಣಿಗೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ](https://etvbharatimages.akamaized.net/etvbharat/prod-images/768-512-3551731-thumbnail-3x2-prt.jpg)
protest
ಕರ್ನಾಟಕ ದಲಿತ ಸಂಘದ ಸದಸ್ಯರಿಂದ ಪ್ರತಿಭಟನೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಹಾಗೆಯೇ ಉಳಿದವರನ್ನು ವಶಕ್ಕೆ ಪಡೆದು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಾಪ್ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿರುವುದು ಸುಳ್ಳು. ಅವರ ತಂದೆಯನ್ನು ಬೆದರಿಸಿ ಈ ಪ್ರಮಾಣಪತ್ರವನ್ನು ರಚಿಸಲಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಮನವಿ ಪತ್ರ ರವಾನೆ ಮಾಡಲಾಯಿತು.
TAGGED:
ಚಿಕ್ಕಬಳ್ಳಾಪುರ