ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶಿ ಕ್ಷೇತ್ರವೆಂದೇ ಪ್ರತೀತಿಯಾಗಿರುವ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಆವರಣದಲ್ಲಿ ಈ ಬಾರಿ ಕಾರ್ತಿಕ ಸೋಮವಾರ ದೀಪ ಹಚ್ಚುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.
ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್ಲ ಪ್ರತಿ ವರ್ಷ ಕಾರ್ತಿಕ ಸೋಮವಾರ ನಂದಿ ದೇಗುಲದಲ್ಲಿ ಬಹಳ ವಿಜೃಂಭಣೆಯಿಂದ ದೀಪಗಳಿಂದ ಕಂಗೊಳಿಸುತ್ತಿತ್ತು. ಆದರೆ, ಈ ಬಾರಿ ಕೊರೊನಾ ಹಿನ್ನೆಲೆ ಶ್ರೀ ಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಆದರೆ, ದೀಪಗಳ ಬೆಳೆಗಿಸುವ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ, ಕೊರೊನಾ ಆತಂಕದಿಂದ ಜಿಲ್ಲಾಡಳಿತ ಕೆಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್ಲ ನಾಳೆ ಬೆಳಗ್ಗೆ 5ರಿಂದ ಸಂಜೆ 8ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಒಂದು ಬಾರಿಗೆ ದೇವಾಲಯದೊಳಗೆ ಕೇವಲ 300 ಮಂದಿಗಷ್ಟೇ ಪ್ರವೇಶಕ್ಕೆ ಅನುಮತಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ದೇವರ ದರ್ಶನ ಪಡೆಯಬೇಕಿದ್ದು, ಮಾಸ್ಕ್ ಹಾಕಿದ್ರೆ ಮಾತ್ರ ದೇವಾಲಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.
ಭಕ್ತರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಪ್ರವೇಶ ಕಲ್ಪಿಸಲಾಗುವುದು. ಮತ್ತೊಂದೆಡೆ ಪ್ರತಿ ವರ್ಷ ಕಾರ್ತಿಕ ಸೋಮವಾರದಂದು ದೇವಾಲಯಕ್ಕೆ ಬರುವ ಭಕ್ತರು ದೇವಾಲಯದೊಳಗೆ ಹಾಗೂ ಕಳೆದ ವರ್ಷದಿಂದ ದೇವಾಲಯದ ಹೊರಭಾಗದಲ್ಲಿ ದೀಪ ಹಚ್ಚಿ ದೇವರಿಗೆ ಆರತಿ ಬೆಳಗಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುತ್ತಿದ್ದರು. ಆದರೆ, ಈ ವರ್ಷ ಭಕ್ತರು ದೇವರ ದರ್ಶನ ಪಡೆಯಬಹುದು. ದೀಪದಾರತಿ ಮಾಡಲು ಅವಕಾಶವಿಲ್ಲ ಅಂತ ಜಿಲ್ಲಾಧಿಕಾರಿ ತಿಳಿಸಿದ್ದಾರೆ.