ಬಾಗೇಪಲ್ಲಿ(ಚಿಕ್ಕಬಳ್ಳಾಪುರ):ಕೊರೊನಾ ಬಗ್ಗೆ ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಕೇಳುತ್ತಿಲ್ಲ. ಈ ಹಿನ್ನೆಲೆ ಯಮರಾಜನೇ ಭೂಮಿಗೆ ಇಳಿದು ಜನರಿಗೆ ಎಚ್ಚರಿಕೆ ಕೊಡುತ್ತಿದ್ದಾನೆ.
ಕೊರೊನಾ ಬಗ್ಗೆ ಎಚ್ಚರಿಕೆ ನೀಡಲು ಧರೆಗಿಳಿದು ಬಂದ ಯಮ
ಪ್ರಜ್ಞಾವಂತ ನಾಗರಿಕ ವೇದಿಕೆ, ಪೊಲೀಸರ ನೆರವಿನೊಂದಿಗೆ ಯಮ ಧರ್ಮರಾಜನ ವೇಷ ಧರಿಸಿದ ವ್ಯಕ್ತಿಯಿಂದ ಕೊರೊನಾ ಜಾಗೃತಿ ಮೂಡಿಸಲು ಮುಂದಾಗಿದೆ.
ಜನರಿಗೆ ಈಗಾಗಲೇ ಎಲ್ಲಾ ರೀತಿಯಲ್ಲೂ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗಿದೆ. ಆದರೂ ಏನನ್ನೂ ಕೇಳುತ್ತಿಲ್ಲ. ಈ ಹಿನ್ನೆಲೆ ಇಲ್ಲಿನ ಪ್ರಜ್ಞಾವಂತ ನಾಗರಿಕ ವೇದಿಕೆ, ಪೊಲೀಸರ ನೆರವಿನೊಂದಿಗೆ ಯಮ ಧರ್ಮರಾಜನ ವೇಷ ಧರಿಸಿದ ವ್ಯಕ್ತಿಯಿಂದ ಕೊರೊನಾ ಜಾಗೃತಿ ಮೂಡಿಸಲು ಮುಂದಾಗಿದೆ.
ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಗೂಳೂರು ವೃತ್ತದಲ್ಲಿ ಕೊರೊನಾ ವೈರಸ್ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿಶ್ವನಾಥ್ ಯಮ ವೇಷಧಾರಿಯಾಗಿ ಗಮನ ಸೆಳೆದರು. ಕೊರೊನಾ ವೈರಸ್ ಸೋಂಕು ಹರಡುವಿಕೆ ದಿನೇ ದಿನೇ ಹೆಚ್ಚುತ್ತಿದೆ, ದಯವಿಟ್ಟು ಮನೆಯಿಂದ ಹೊರಗೆ ಬರಬೇಡಿ . ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿಕೊಂಡರು.