ಕರ್ನಾಟಕ

karnataka

ETV Bharat / state

ಮುನಿಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್​​: ದೂರು ದಾಖಲು - ಅವಹೇಳನಕಾರಿ ಪೋಸ್ಟ್

ಕೈ ಸಂಸದ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾದ ಕೆ.ಹೆಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

ಸಂಸದ ಕೆ.ಹೆಚ್.ಮುನಿಯಪ್ಪ

By

Published : Mar 22, 2019, 10:33 AM IST

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಕೋಲಾರ ಕ್ಷೇತ್ರದ ಲೋಕಸಭಾ ಕೈ ಅಭ್ಯರ್ಥಿ ಹಾಗೂ ಉಪ ಸಭಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೈ ಸಂಸದ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾದ ಕೆ.ಹೆಚ್.ಮುನಿಯಪ್ಪ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉಪ ಸಭಾಧ್ಯಕ್ಷ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ವಾರ್ ನಡೆಯುತ್ತಿದೆ.

ಇತ್ತಿಚೆಗಷ್ಟೇ ಕೆ.ಹೆಚ್.ಮುನಿಯಪ್ಪ ವಿರುದ್ಧ 410 ಎಕರೆ ಜಮೀನು ಕಬಳಿಕೆ ಆರೋಪ ಕೇಳಿ ಬಂದಿತ್ತು. ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಈಗ ಇದೇ ವಿಚಾರವಾಗಿ ಪೋಸ್ಟ್ ಮಾಡಿ ಸ್ವಾಭಿಮಾನಕ್ಕೆ ಧಕ್ಕೆ ತರುವ ಹಾಗೂ ತೇಜೋವಧೆಯಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಚಿಂತಾಮಣಿ ನಗರ ಠಾಣೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅತಾಹುಲ್ಲಾ ದೂರು ದಾಖಲಿಸಿದ್ದಾರೆ.

ಶ್ರೀನಾಥ್ ರೆಡ್ಡಿ ಹಾಗೂ ಸುನಿಲ್​ ಕುಮಾರ್ ಎಂಬುವವರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಅವರು ಠಾಣೆಯ ಮೆಟ್ಟಿಲೇರುವಂತಾಗಿದೆ.

ABOUT THE AUTHOR

...view details