ಕರ್ನಾಟಕ

karnataka

ETV Bharat / state

ಚಿಕ್ಕಬಳ್ಳಾಪುರ: ಮಹಿಳೆ ಹೊಟ್ಟೆಯಲ್ಲಿದ್ದ 15 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು!

ಮಹಿಳೆಯ ಹೊಟ್ಟೆಯಲ್ಲಿದ್ದ ಬರೋಬ್ಬರಿ 15 ಕೆಜಿ ತೂಕದ ಗೆಡ್ಡೆಯನ್ನು ಗುಡಿಬಂಡೆ ಸರ್ಕಾರಿ ಅಸ್ಪೆತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ.

15 kg tumor
15 ಕೆಜಿ ಗಡ್ಡೆ ಹೊರತೆಗದ ವೈದ್ಯರು

By

Published : Apr 29, 2021, 12:14 PM IST

ಗುಡಿಬಂಡೆ (ಚಿಕ್ಕಬಳ್ಳಾಪುರ): ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 15 ಕೆಜಿ ತೂಕದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಜಿಲ್ಲೆಯ ಗುಡಿಬಂಡೆ ಸರ್ಕಾರಿ ಅಸ್ಪೆತ್ರೆಯಲ್ಲಿ ವೈದ್ಯರು ಹೊರ ತೆಗೆದಿದ್ದಾರೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆ ಗ್ರಾಮದ ಮಹಿಳೆ ಬಹಳ ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಇತ್ತೀಚೆಗೆ ಚಿಕಿತ್ಸೆಗೆಂದು ಮಹಿಳೆ ಗುಡಿಬಂಡೆ ಆಸ್ಪತ್ರೆಗೆ ಬಂದಾಗ ವೈದ್ಯರು ಆಕೆಗೆ ಸ್ಕ್ಯಾನಿಂಗ್ ಮಾಡಿದ್ದಾರೆ. ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿದೆ. ಹೀಗಾಗಿ ನಿನ್ನೆ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿ ಆಕೆಯ ಹೊಟ್ಟೆಯಲ್ಲಿ ಇರುವ ಸುಮಾರು 15 ಕೆಜಿ ತೂಕದ ಗೆಡ್ಡೆಯನ್ನು ಹೊರ ತೆಗೆದಿದ್ದಾರೆ.

15 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು

ಮಹಿಳೆ ಆರೋಗ್ಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಷ್ಟೇ ಅಲ್ಲದೆ ಮಹಿಳೆ ಹೊಟ್ಟೆಯಿಂದ ಹೊರ ತೆಗೆದ ಗಡ್ಡೆಯು ಇತ್ತೀಚಿನ ವರ್ಷಗಳಲ್ಲಿ ಕಂಡು ಬಂದ ಅತೀ ದೊಡ್ಡ ಗಡ್ಡೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ABOUT THE AUTHOR

...view details