ಕರ್ನಾಟಕ

karnataka

ETV Bharat / state

ಬಾಗೇಪಲ್ಲಿ ತಾಲೂಕು ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ, ಪರಿಶೀಲನೆ - ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ

ಆಂಬ್ಯುಲೆನ್ಸ್ ಮತ್ತು ಬೆಡ್ ಲಭ್ಯತೆ, ಆಕ್ಸಿಜನ್ ಮತ್ತು ಔಷಧದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾವಹಿಸಲು ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಹೆಚ್ಚುವರಿ ಸಿಲಿಂಡರ್​ಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ.

Dr. Sudhakar visits Bagepalli Taluk Hospital
ಸಚಿವ ಸುಧಾಕರ್

By

Published : May 14, 2021, 9:30 PM IST

ಬಾಗೇಪಲ್ಲಿ:ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಚಿವ ಡಾ.ಸುಧಾಕರ್ ಭೇಟಿ ನೀಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಬಾಗೇಪಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಅವರಿಂದ ಮಾಹಿತಿಯನ್ನು ಪಡೆದು ಪರಿಶೀಲಿಸಲಾಯಿತು.

ಸಚಿವ ಸುಧಾಕರ್

ಓದಿ: ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲೇ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ: ಸುಧಾಕರ್​​

ಆಂಬ್ಯುಲೆನ್ಸ್ ಮತ್ತು ಬೆಡ್ ಲಭ್ಯತೆ, ಆಕ್ಸಿಜನ್ ಮತ್ತು ಔಷಧದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನಿಗಾವಹಿಸಲು ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಹೆಚ್ಚುವರಿ ಸಿಲಿಂಡರ್​ಗಳನ್ನು ತರಲು ಪ್ರಯತ್ನಿಸಲಾಗುತ್ತಿದೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಆಕ್ಸಿಜನ್ ಘಟಕ ಹಾಗೂ ಆಕ್ಸಿಜನ್ ಜನರೇಟರ್​ಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ.

ಸಚಿವ ಸುಧಾಕರ್

ಈ ದಿಸೆಯಲ್ಲಿ ಸಿಎಸ್​​ಆರ್ ಅನುದಾನದಲ್ಲಿ ಜಿಲ್ಲಾ ಕೇಂದ್ರಕ್ಕೆ ಅಗತ್ಯವಾದಷ್ಟು ಆಕ್ಸಿಜನ್ ಘಟಕ ಸ್ಥಾಪಿಸಲಾಗುವುದು. ಉಳಿದಂತೆ ಎಸಿಸಿ ಕಂಪನಿ ವತಿಯಿಂದ ಗೌರಿಬಿದನೂರಿನಲ್ಲಿ, ಟೈಟಾನ್ ಕಂಪನಿ ವತಿಯಿಂದ ಬಾಗೇಪಲ್ಲಿಯಲ್ಲಿ ಆಕ್ಸಿಜನ್ ಪ್ಲಾಂಟ್​ಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿದ್ದು, ಶಿಡ್ಲಘಟ್ಟದಲ್ಲೂ ಯಾವುದಾದರೊಂದು ಸಂಸ್ಥೆ ವತಿಯಿಂದ ಘಟಕ ಸ್ಥಾಪಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಆರ್.ಲತಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ಸುಧಾಕರ್

ABOUT THE AUTHOR

...view details