ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ವಿದ್ಯಾಗಮ ಕಾರ್ಯಕ್ರಮ ಪೂರಕ

ಸರ್ಕಾರಿ ಆದೇಶ ಬರುವವರೆಗೆ ಶಾಲೆ ಆವರಣದಲ್ಲಿ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ನಡೆಸುವಂತಿಲ್ಲ. ಹಳ್ಳಿಯ ಜನವಸತಿ ಪ್ರದೇಶದ ಸ್ಥಳಗಳಲ್ಲಿಯೇ ವಿದ್ಯಾಗಮ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ಚಟುವಟಿಕೆಗಳನ್ನು ನಡೆಸಬೇಕು..

ಬಾಗೇಪಲ್ಲಿ
ಬಾಗೇಪಲ್ಲಿ

By

Published : Sep 12, 2020, 3:22 PM IST

ಬಾಗೇಪಲ್ಲಿ :ಕೊರೊನಾ ಹಿನ್ನೆಲೆ ಶಾಲೆಗಳು ಆರಂಭವಾಗದ ಕಾರಣ ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮ ಕೈಗೊಂಡಿದ್ದು, ಡಿವೈಎಸ್ಪಿ ಶ್ರೀಮತಿ ಸುಕನ್ಯಾ ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ಐದಾರು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಹಾಗಾಗಿ, ವಿದ್ಯಾಗಮ ಮೂಲಕ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸುವ ನಿಟ್ಟಿನಲ್ಲಿ ಜನವಸತಿ ಪ್ರದೇಶದಲ್ಲಿ ಶಿಕ್ಷಕರು ಕಾರ್ಯಕ್ರಮ ಕೈಗೊಂಡಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಗೂಳೂರು ಮತ್ತು ಮಾರ್ಗಾನುಕುಂಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ವಿದ್ಯಾಗಮ ನಿರಂತರ ಕಲಿಕಾ ಜನವಸತಿ ಪ್ರದೇಶಕ್ಕೆ ಡಿವೈಎಸ್ಪಿ ಶ್ರೀಮತಿ ಸುಕನ್ಯಾ ಅವರು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಆದೇಶ ಬರುವವರೆಗೆ ಶಾಲೆ ಆವರಣದಲ್ಲಿ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮ ನಡೆಸುವಂತಿಲ್ಲ. ಹಳ್ಳಿಯ ಜನವಸತಿ ಪ್ರದೇಶದ ಸ್ಥಳಗಳಲ್ಲಿಯೇ ವಿದ್ಯಾಗಮ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ಚಟುವಟಿಕೆಗಳನ್ನು ನಡೆಬೇಕೆಂದು ತಿಳಿಸಿದರು.

ABOUT THE AUTHOR

...view details