ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಭೂಮಿ ಮತ್ತೆ ಕಂಪಿಸಿದ. ಗುಡಿಬಂಡೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ತಡರಾತ್ರಿ ಭೂಕಂಪ ಸಂಭವಿಸಿದೆ. ಇದರಿಂದ ಜನ ಭಯಭೀತರಾಗಿ ಮನೆಯ ಒಳಗೆ ಹೋಗಲು ಹಿಂದೇಟು ಹಾಕಿದ್ದಾರೆ.
ಗುಡಿಬಂಡೆ ತಾಲೂಕಿನ ಕಂಬಳಹಳ್ಳಿ, ಬುಲ್ಲಸಂದ್ರ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಸುಮಾರು 5 ನಿಮಿಷಗಳ ಕಾಲ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾದ ಹಿನ್ನೆಲೆ ಭಯಗೊಂಡು ಮನೆಯಿಂದ ಹೊರ ಬಂದು ಚಳಿಯಲ್ಲೇ ರಾತ್ರಿಯಿಡೀ ಕಾಲ ಕಳೆದಿದ್ದಾರೆ.