ಚಿಕ್ಕಬಳ್ಳಾಪುರ: ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ. ತಾಲೂಕಿನ ಬಿಸೇಗಾರಹಳ್ಳಿ, ಶೆಟ್ಟಿಗೆರೆ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಗ್ರಾಮಸ್ಥರು ಮನೆಯಿಂದ ಹೊರ ಬಂದು ಕಾಲ ಕಳೆಯುವಂತಾಗಿದೆ.
ಎರಡು ಗ್ರಾಮಗಳಲ್ಲಿ ಏಕಕಾಲದಲ್ಲಿ ಬೆಳಗ್ಗೆ 7 ಗಂಟೆಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಚಿಂತಾಮಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ಹಾಗೂ ಮಂಡಿಕಲ್ ವ್ಯಾಪ್ತಿಯ ಹಲವು ಗ್ರಾಮಗಳಲ್ಲೂ ಇದೇ ಅನುಭವ ಉಂಟಾಗಿದೆ.
2018ರಲ್ಲಿ ಬಾಗೇಪಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.0 ತೀವ್ರತೆ ದಾಖಲಾಗಿತ್ತು.