ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನತೆ ತತ್ತರಿಸಿ ಹೋಗಿದ್ದು ಬೆಳೆದ ಬೆಳೆಗಳು ನೀರು ಪಾಲಾಗಿವೆ. ಅಧಿಕ ಮಳೆಯಿಂದ ಜಿಲ್ಲೆಯ ವಾಣಿಜ್ಯ ಬೆಳೆಗಳಾದ ಶೇಂಗಾ, ದ್ರಾಕ್ಷಿ, ರಾಗಿ, ಹವರೆ ಬೆಳೆ ಹಾನಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ: ವಾಣಿಜ್ಯ ಬೆಳೆಗಳಿಗೆ ಹಾನಿ - Economical crops damaged by rain in Chikkaballapura
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ವಾಣಿಜ್ಯ ಬೆಳೆಗಳಾದ ಶೇಂಗಾ, ದ್ರಾಕ್ಷಿ, ರಾಗಿ, ಹವರೆ ಬೆಳೆ ಹಾನಿಯಾಗಿದೆ. ಚಿಂತಾಮಣಿ ನಗರದ ರೈಲ್ವೆ ಅಂಡರ್‌ಪಾಸ್‌ಗಳು ಸಂಪೂರ್ಣ ಜಲಾವೃತ್ತಗೊಂಡಿದ್ದು, ವಾಹನ ಸವಾರರಿಗೆ ದಿಕ್ಕುತೋಚದಂತಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ
ಮತ್ತೊಂದೆಡೆ ಜಿಲ್ಲೆಯ ಚಿಂತಾಮಣಿ ನಗರದ ರೈಲ್ವೆ ಅಂಡರ್‌ಪಾಸ್‌ಗಳು ಸಂಪೂರ್ಣ ಜಲಾವೃತ್ತಗೊಂಡಿದ್ದು, ವಾಹನ ಸವಾರರಿಗೆ ದಿಕ್ಕುತೋಚದಂತಾಗಿತ್ತು. ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯಲ್ಲಿ ರಾಗಿ, ಹವರೆ, ಶೇಂಗಾ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು, ರೈತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.