ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ 8 ಜನರನ್ನು ನಂದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಇರುವ ವೈಟ್ ನಿರ್ವಾಣ ಬೈ ಜಡೇ ರೆಸಾರ್ಟ್ನಲ್ಲಿ ತಡ ರಾತ್ರಿ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ತಂಡವನ್ನು ನಂದಿ ಪೊಲೀಸರು ಪ್ರಶ್ನಿಸಿದ್ದಾರೆ. ಆ ವೇಳೆ, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಪಾರ್ಟಿ ಮಾಡುತ್ತಿದ್ದವರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.