ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಇದೆ: ಶಾಸಕ ಎಂ ಕೃಷ್ಣಾರೆಡ್ಡಿ ಭವಿಷ್ಯ - Elections are likely to come as close to the state as possible

ರಾಜ್ಯದ ಸದ್ಯದ ರಾಜಕೀಯ ಪರಿಸ್ಥಿತಿ ನೋಡಿದರೆ ಆದಷ್ಟು ಬೇಗ ಚುನಾವಣೆ ನಡೆಯುವ ಸಂಭವವಿದೆ ಎಂದು ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ಭವಿಷ್ಯ ನುಡಿದರು.

ಶಾಸಕ ಎಂ ಕೃಷ್ಣಾರೆಡ್ಡಿ ಮಾತನಾಡಿದರು.

By

Published : Sep 13, 2019, 8:55 PM IST

ಚಿಕ್ಕಬಳ್ಳಾಪುರ:ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆಗಳನ್ನು ಗಮನಿಸಿದ್ರೆ ಶೀಘ್ರದಲ್ಲೇ ಚುನಾವಣೆ ಎದುರಾಗುವ ಸಾಧ್ಯತೆ ಇದೆ ಎಂದು ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ಭವಿಷ್ಯ ನುಡಿದರು.

ಚಿಂತಾಮಣಿ ತಾಲ್ಲೂಕಿನ ಸಿದ್ಧಿಮಠ ಗ್ರಾಮದಲ್ಲಿರುವ ಹಜರತ್ ಸೈಯ್ಯದ್ ಸಿದ್ದಿಖ್ ಅಹಮದ್ ಶಾ ಖಾದ್ರಿ ದರ್ಗಾಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ರು.

ಚಿಂತಾಮಣಿ ಶಾಸಕ ಎಂ ಕೃಷ್ಣಾರೆಡ್ಡಿ

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಮ್ಮ ಕ್ಷೇತ್ರಕ್ಕೆ ಹಚ್ಚಿನ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಅದಕ್ಕಾಗಿ ನಾನು 75 ಕೋಟಿ ರೂಪಾಯಿ ಬೇಕೆಂದು ಬೇಡಿಕೆ ಇಟ್ಟಿದ್ದೆ. ಈಗಿನ ಸರ್ಕಾರ ಅದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಅಸಮಾಧಾನ ತೋರಿಸಿದ್ರು.

ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಸರ್ಕಾರ ಅನುದಾನ ನೀಡಿದ್ದರೆ ಶೇ 80% ಕ್ಷೇತ್ರ ಅಭಿವೃದ್ಧಿ ಆಗುತ್ತಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಗಮನ ಸೆಳೆಯುವುದಾಗಿ ತಿಳಿಸಿದ್ರು.

ABOUT THE AUTHOR

...view details