ಚಿಕ್ಕಬಳ್ಳಾಪುರ: ತಾಲೂಕಿನ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯಶ್ವರ ರಥೋತ್ಸವ ಮತ್ತು ಜಾತ್ರೆ ವಿಜೃಂಭಣೆಯಿಂದ ಇಂದು ನೆರವೇರಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವರ ದರ್ಶನವನ್ನು ಪಡೆದು ಹರಕೆಗಳನ್ನು ಸಮರ್ಪಿಸಿದರು.
ವಿಜೃಂಭಣೆಯಿಂದ ನಡೆದ ಇತಿಹಾಸ ಪ್ರಸಿದ್ಧ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯಶ್ವರ ರಥೋತ್ಸವ - ಹೊನ್ನೇನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು
ಚಿಕ್ಕಬಳ್ಳಾಪುರ ಹೊರ ವಲಯದ ಇತಿಹಾಸ ಪ್ರಸಿದ್ಧ ಚಿತ್ರಾವತಿಯ ಶ್ರೀ ಸುಬ್ರಹ್ಮಣ್ಯಶ್ವರನಿಗೆ, ಪ್ರತಿ ಮಾಘ ಮಾಸದ ಕುಮಾರ ಷಷ್ಟಿಯಂದು ರಥೋತ್ಸವ ಮತ್ತು ಜಾತ್ರೆ ಅದ್ಧೂರಿಯಾಗಿ ನಡೆಯುತ್ತದೆ. ಸುಮಾರು 20 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಜಾತ್ರೆಗೆ ಆಗಮಿಸಿ ಹರಕೆಯನ್ನು ಸಮರ್ಪಿಸಿ ಅಲ್ಲಿನ ಹುತ್ತಕ್ಕೆ ಹಾಲೆರೆಯುತ್ತಾರೆ.
ಚಿಕ್ಕಬಳ್ಳಾಪುರ ಹೊರ ವಲಯದ ಇತಿಹಾಸ ಪ್ರಸಿದ್ಧ ಚಿತ್ರಾವತಿಯ ಶ್ರೀ ಸುಬ್ರಹ್ಮಣ್ಯಶ್ವರನಿಗೆ ಪ್ರತಿ ಮಾಘ ಮಾಸದ ಕುಮಾರಷಷ್ಟಿಯಂದು ರಥೋತ್ಸವ ಮತ್ತು ಜಾತ್ರೆ ಅದ್ಧೂರಿಯಾಗಿ ನಡೆಯುತ್ತದೆ. ಸುಮಾರು 20 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಜಾತ್ರೆಗೆ ಆಗಮಿಸಿ ಹರಕೆ ಸಮರ್ಪಿಸಿ ಅಲ್ಲಿನ ಹುತ್ತಕ್ಕೆ ಹಾಲೆರೆಯುತ್ತಾರೆ.
ಸದ್ಯ ಇಂದು ಮುಂಜಾನೆಯಿಂದ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರು, ಚಿತ್ರಾವತಿ ಶ್ರೀ ಸುಬ್ರಹ್ಮಣ್ಯಶ್ವರನ ದರ್ಶನ ಪಡೆದು ಹರಕೆ ತೀರಿಸಿಕೊಂಡು ಹುತ್ತಕ್ಕೆ ಹಾಲೆರೆದರು. ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಪನ್ನೀರು ಪತ್ರೆ, ಬಾಳೆಹಣ್ಣು ಎಸೆದು ದೇವರ ಕೃಪೆಗೆ ಪಾತ್ರರಾದರು.
ಜಾತ್ರೆಗೆ ಬಂದ ಭಕ್ತಾದಿಗಳಿಗೆ ಉಪಹಾರ, ಪಾನಕ, ಮಜ್ಜಿಗೆ ಮತ್ತು ಕೋಸಂಬರಿಯನ್ನು ಹೊನ್ನೇನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಏರ್ಪಡಿಸಿದ್ದರು. ಯಾವುದೇ ಕಳ್ಳತನ ಪ್ರಕರಣಗಳು ನಡೆಯದಂತೆ ಗ್ರಾಮಾಂತರ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕ್ಷಣಕ್ಷಣಕ್ಕೆ ಧ್ವನಿವರ್ಧಕಗಳ ಮುಖಾಂತರ ಮಾಹಿತಿ ಕೊಡುತ್ತಿದ್ದರು.