ಚಿಕ್ಕಬಳ್ಳಾಪುರ: ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿಯ ದೇವರಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಅಕ್ರಮವಾಗಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ - Police Marijuana ride news
ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿಯ ದೇವರಮಾಕಲಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, 20 ಕೆಜಿ ತೂಕದ 12 ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
Arrest
ವೆಂಕಟೇಶಪ್ಪ ಬಂಧಿತ ಆರೋಪಿ. ಈತ ಅಕ್ರಮವಾಗಿ ತನ್ನ ತೋಟದಲ್ಲಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸುಮಾರು 20 ಕೆಜಿ ತೂಕದ 12 ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.