ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿ ಪಾಪಿ ತಂದೆಯೋರ್ವ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬದುಕು ಸರ್ವನಾಶ ಮಾಡಿದ ಮದ್ಯ... ಕುಡಿದ ಮತ್ತಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ - undefined
ಕುಡಿದ ಮತ್ತಿನಲ್ಲಿ ಪಾಪಿ ತಂದೆಯೋರ್ವ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ.
![ಬದುಕು ಸರ್ವನಾಶ ಮಾಡಿದ ಮದ್ಯ... ಕುಡಿದ ಮತ್ತಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ](https://etvbharatimages.akamaized.net/etvbharat/prod-images/768-512-3750880-thumbnail-3x2-ckbn.jpg)
ಆರೋಪಿ ತಂದೆ
ಶಿಡ್ಲಘಟ್ಟ ತಾಲೂಕಿನಲ್ಲಿ ಗುರುವಾರ ಈ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿದೆ. ತಂದೆಯ ಹೇಯ ಕೃತ್ಯದಿಂದ 5 ವರ್ಷದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಪಾಪಿ ತಂದೆ ಗ್ರಾಮದಿಂದ ಪರಾರಿಯಾಗಿದ್ದಾನೆ. ತಂದೆಯೇ ಅತ್ಯಾಚಾರ ನಡೆಸಿದ್ದಾನೆ ಎಂದು ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣೆಗೆ ತಾಯಿಯಿಂದ ದೂರು ದಾಖಲಾಗಿದ್ದು, ಕಾಮುಕ ತಂದೆಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated : Jul 5, 2019, 11:48 AM IST