ಚಿಕ್ಕಬಳ್ಳಾಪುರ: ಬಡವರು ಹಾಗು ಮಕ್ಕಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಿದ ಆರೋಪದಡಿ ಐವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಇಲ್ಲಿನ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ: ಐವರ ವಿರುದ್ಧ ಎಫ್‌ಐಆರ್ - ಚಿಕ್ಕಬಳ್ಳಾಪುರದಲ್ಲಿ ಮತಾಂತರಕ್ಕೆ ಯತ್ನ ಐವರ ವಿರುದ್ಧ ಎಫ್ ಐಆರ್
ಕ್ರೈಸ್ತ ಧರ್ಮಕ್ಕೆ ಮತಾಂತರಿಸಿದ ಗಂಭೀರ ಆರೋಪದಡಿ ಐವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
![ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ: ಐವರ ವಿರುದ್ಧ ಎಫ್‌ಐಆರ್ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆ](https://etvbharatimages.akamaized.net/etvbharat/prod-images/768-512-13254106-thumbnail-3x2-sdjiks.jpg)
ನಗರದ ಕಂದವಾರದಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂಗಳನ್ನು ಹಾಗೂ ಮಕ್ಕಳನ್ನು ಮತಾಂತರ ಮಾಡುತಿದ್ದಾರೆ, ಬಲವಂತವಾಗಿ ಬೈಬಲ್ ಪಠಣೆ ಮಾಡಿಸಿ ಮತಾಂತರ ಮಾಡುತಿದ್ದಾರೆಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಟೈಲರಿಂಗ್ ಹೇಳಿಕೊಡುತ್ತಿದ್ದ ಕೇಂದ್ರಕ್ಕೆ ನುಗ್ಗಿ ಅಲ್ಲಿದ್ದ ಕ್ರಿಶ್ಚಿಯನ್ ಧರ್ಮದ ಮೂರು ಮಂದಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಹಿಂದೂಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ವಿಚಾರಣೆಗೆ ಕರೆತಂದಿರುವವರನ್ನು ಬಿಟ್ಟುಬಿಡಿ ಎಂದು ಕ್ರೈಸ್ತ ಧರ್ಮದ ಅನುಯಾಯಿಗಳು ನಗರ ಠಾಣೆ ಮುಂದೆ ಜಮಾಯಿಸಿದ್ದರು. ಈ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮುಕಿ ನಡೆದಿದ್ದು ಉದ್ವಗ್ನ ಪರಿಸ್ಥಿತಿ ಎದುರಾಗಿತ್ತು. ನಂತರ ಮಧ್ಯಪ್ರವೇಶಿಸಿದ ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿದ್ದಾರೆ.