ಚಿಂತಾಮಣಿ:ರಾಜ್ಯದಲ್ಲಿ ಕೋವಿಡ್-19 ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ವಾರು ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಲಾಗಿದ್ದು, ವಾರ್ಡ್ಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಚಿಂತಾಮಣಿ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 01 ರಿಂದ 31 ರ ವಾರ್ಡಿನ ಜನತೆಗೆ ಮುನ್ನೆಚ್ಚರಿಕಾ ಸಲಹೆಗಳನ್ನು ನೀಡಲು ತಂಡಗಳನ್ನು ರಚಿಸಲಾಗಿದೆ.