ಚಿಕ್ಕಬಳ್ಳಾಪುರ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ನಾಲ್ಕು ದಿನಗಳ ಕಟ್ಟುನಿಟ್ಟಿನ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕೋವಿಡ್ ನಿಯಂತ್ರಿಸಲು ಮೇ 27 ರಿಂದ 30ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯನ್ನು ಸಂಫೂರ್ಣ ಬಂದ್ ಮಾಡಲಾಗುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಮೂರು ದಿನ ಅವಕಾಶ ಕಲ್ಪಿಸಲಾಗಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸಿ ಖರೀದಿಸುವಂತೆ ಮನವಿ ಮಾಡಿದರು.